SHARE

ಬೆಳಗಾವಿ: ಜಲಸಂಪನ್ಮೂಲ ಇಲಾಖೆಯಲ್ಲಿನ ಎಂಜಿನಿಯರ್‌ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನಿಸಿದ್ದು, ಅಭ್ಯರ್ಥಿಗಳು ಆಧಾರ್‌ ಕಾರ್ಡ್‌, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಜೊತೆಗೆ ಪದವಿ ಪ್ರಮಾಣಪತ್ರ ಸಲ್ಲಿಸಬೇಕಾಗಿದೆ. ಹೀಗಾಗಿ ಇತ್ತೀಚೆಗೆ 8ನೇ ಸೆಮಿಸ್ಟರ್‌ನಲ್ಲಿ ಉತ್ತೀರ್ಣರಾದ ಸಿವಿಲ್‌ ಮತ್ತು ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳು ಪದವಿ ಪ್ರಮಾಣಪತ್ರಕ್ಕಾಗಿ ಮನವಿ ಸಲ್ಲಿಸಿದ್ದರು.

ಕೆಪಿಎಸ್‌ಸಿ ಪರೀಕ್ಷೆಗೆ ಹಾಜರಾಗಲು ಬಯಸುವ ಅಭ್ಯರ್ಥಿಗಳು ತಾತ್ಕಾಲಿಕ ಪದವಿ ಪ್ರಮಾಣಪತ್ರ ಕೋರಿ, ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ಅವರಿಗೆ ಪ್ರಮಾಣಪತ್ರ ಪೂರೈಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಸತೀಶ ಅಣ್ಣಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.