SHARE

ಬೆಳಗಾವಿ: ಕಬ್ಬಿನ ಬಾಕಿ ಬಿಲ್ ಬಿಡುಗಡೆ ಮಾಡಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಉಸ್ತುವರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ವಾಹನ ತಡೆದು ಘೇರಾವ್ ಹಾಕಿತು.Bರೈತರು ಬೆಳೆದ ಕಬ್ಬಿನ ಬಾಕಿ ಹಣ ಕಾರ್ಖಾನೆಗಳಿಂದ ರೈತರಿಗೆ ಕೊಡಿಸಲು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. ಜಿಲ್ಲಾಧಿಕಾರಿ ಮತ್ತು ಸಚಿವರ ವಿರುದ್ಧ ಘೋಷಣೆ ಕೂಗಲಾಯಿತು.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆ ನಂತರ ಹೊರ ಹೋಗುತ್ತಿದ್ದ ಸಚಿವ ರಮೇಶ ಜಾರಕಿಹೊಳಿ ಅವರ ವಾಹನದ ಎದುರು ರೈತರು ಕುಳಿತು ಕಳೆದ ಹಂಗಾಮಿನಲ್ಲಿ ಸಚಿವರ ಮಾಲೀಕತ್ವದ ಕಾರ್ಖಾನೆಗೆ ರೈತರು ಕಳುಹಿಸಿರುವ ಕಬ್ಬಿನ ಬಾಕಿ ಹಣ ನೀಡುವಂತೆ ಆಗ್ರಹಿಸಿದರು. ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿ, ತಾವು ರೈತರ ಪರವಾಗಿದ್ದೇವೆ. ರೈತರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಿದ್ದೇವೆ. ಎಪಿಎಂಸಿಗಳಲ್ಲಿ ವಿವಿಧ ಬೆಳೆಗಳ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಡಿ.10ರ ನಂತರ ಕಬ್ಬಿನ ಬಾಕಿ ಹಣ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.