SHARE

ಬೆಳಗಾವಿ: ರಾಜ್ಯ ವಸತಿ ಸಚಿವಾಲಯ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡವರಿಗೆ ಮನೆ ಕಟ್ಟಿಕೊಡಲು ಮುಂದಾಗಿದ್ದು, ಜಿಪಂ. ಸಿಇಓ ಅವರಿಗೆ ವಸತಿ ಸಚಿವ ಎಂ. ಕೃಷ್ಣಪ್ಪ ಪತ್ರದ ಮೂಲಕ ಸೂಚಿಸಿದ್ದಾರೆ. ಬಸವ ವಸತಿ ಯೋಜನೆಯಡಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಡವರಿಗೆ ಈ ಮನೆ ಭಾಗ್ಯ ಒದಗಲಿದೆ. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಗ್ರಾಮೀಣ ಮತಕ್ಷೇತ್ರದ ಗ್ರಾ.ಪಂ.ಗಳ ಬಡವರಾದ ಫಲಾನುಭವಿ ಗ್ರಾಮಸ್ಥರಿಗೆ ಮನೆ ಮಂಜೂರು ಮಾಡುವಂತೆ ಸರಕಾರಕ್ಕೆ ಪತ್ರದ ಮೂಲಕ ಮನವಿ ಮಾಡಿದ್ದರು. ಅದರಂತೆ ಗ್ರಾಮೀಣ ಕ್ಷೇತ್ರದ ಫಲಾನುಭವಿಗಳಿಗೆ ಸರಕಾರ 563 ಮನೆಗಳನ್ನು ಮಂಜೂರು ಮಾಡಿ ಕಟ್ಟಿಕೊಡಲು ಜಿಲ್ಲಾ ಪಂಚಾಯಿತಿಗೆ ಸೂಚಿಸಿದೆ.