SHARE

ಬೆಳಗಾವಿ: ಮಹಾದಾಯಿ ಯೋಜನೆ ಜಾರಿಗೆ ಒತ್ತಾಯಿಸಿ ಹೋರಾಟದ ಭಾಗವಾಗಿ ನಾಳೆ ನಡೆಯುವ ಉತ್ತರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಇಂದು ಆದೇಶ ಹೊರಡಿಸಿದ್ದಾರೆ. ಸವದತ್ತಿ, ರಾಮದುರ್ಗ ಹಾಗೂ ಬೈಲಹೊಂಗಲ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದ್ದು, ಡಿಸಿ ಎಸ್. ಜಿಯಾವುಲ್ಲಾ ಆದೇಶ ಹೊರಡಿಸಿದ್ದಾರೆ. ಅಹಿತಕರ ಘಟನೆಗಳ ಸಂಭವ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಬಗ್ಗೆ ಮನಗಂಡು ಜಿಲ್ಲಾಡಳಿತ ಆದೇಶ ನೀಡಿದೆ.