SHARE

ಬೆಳಗಾವಿ: ಲೋಕಪಾಲ, ಕೃಷಿ, ಚುನಾವಣಾ ಪ್ರಕ್ರಿಯೆಯಲ್ಲಿ ಸುದಾರಣೆಯೊಂದಿಗೆ ಬದಲಾವಣೆಗೆ ಒತ್ತಾಯಿಸಿ ಮಾರ್ಚ 23 ರಂದು ದೆಹಲಿ ಚಲೋ ಹಮ್ಮಿಕೊಂಡು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಿಳಿಸಿದರು. ಅವರು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಉಪವಾಸ ಸತ್ಯಾಗ್ರಹ ನಡೆಸಲು ಅನುಮತಿ ನೀಡದಿದ್ದರೆ ಜೈಲಿನಲ್ಲಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತೇನೆ ಎಂದರು. ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ ಎಂದು ಮಾತಿನಲ್ಲಿ, ಜಾಹೀರಾತುಗಳಲ್ಲಿ ಮಾತನಾಡುವುದನ್ನು ಜನಲೋಕಪಾಲ ಹಾಗೂ ಲೋಕಾಯುಕ್ತ ಕಾನೂನಿಗೆ ಶಕ್ತಿ ನೀಡಿ ಅದನ್ನು ಬಿಟ್ಟು ಬಲಹಿನಗೊಳಿಸುತ್ತಿರುವುದು ಸರಿಯಲ್ಲ ಎಂದರು.

ಉದ್ಯಮಿಗಳ ಲಕ್ಷಾಂತರ ರೂ.ಬಡ್ಡಿಯನ್ನು ಮನ್ನಾ ಮಾಡುವ ಸರಕಾರ ರೈತರ ಬಡ್ಡಿ ಮನ್ನಾ ಯಾಕೆ ಮಾಡುತ್ತಿಲ್ಲ. ದೇಶದಲ್ಲಿ 12 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಕಾರ ರೈತರ ಬಗ್ಗೆ ಚಿಂತನೆ ಮಾಡುತ್ತಿಲ್ಲ. ಉದ್ಯಮಿಗಳ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಆರೋಪಿಸಿದರು. ದೇಶದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡಿಸೆಂಬರ್ 9 ಪ್ರವಾಸ ಕೈಗೊಂಡಿದ್ದೇನೆ. ರಾಜ್ಯದ ಅನೇಕ ರಾಜ್ಯಗಳಲ್ಲಿ ಜನ ಬೆಂಬಲ ದೊರೆಯುತ್ತಿದೆ ಎಂದು ಅಣ್ಣಾ ಹಜಾರೆ ಹೇಳಿದರು.