SHARE

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯನಿರ್ವಾಹಕ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ವಿರುದ್ಧ ನಗರದ ನ್ಯಾಯವಾದಿ ದೇವರಾಜ್ ಬಸ್ತವಾಡೆ ನಗರ ಪೊಲೀಸ್ ಕಮಿಷ್ನರ್ ಡಾ. ಡಿ. ಸಿ. ರಾಜಪ್ಪ ಅವರಿಗೆ ಇಂದು ದೂರು ಸಲ್ಲಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದರೆ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್ ಬಿಜೆಪಿಯನ್ನು ಉಗ್ರಗಾಮಿ ಸಂಘಟನೆ ಎಂದು ಜರಿದಿದ್ದಾರೆ. ಇಬ್ಬರ ವಿರುದ್ದವು ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ IPC 153a ಅಡಿ ಪ್ರಕರಣ ದಾಖಲಿಸಬೇಕು ಎಂದು ಕಮಿಷ್ನರ್ ಗೆ ಒತ್ತಾಯಿಸಿದ್ದಾರೆ.

ಬಿಜೆಪಿ ಕಾನೂನು ಕೋಶದ ರಾಜ್ಯ ಕಾರ್ಯಕಾರಿ ಅನಿಲ ಬೆನಕೆ, ಚಿದಾನಂದ ತೋಟಗಿ, ರಾಜು ಶೇಡಬಾಳೆ ಇತರರು ಉಪಸ್ಥಿತರಿದ್ದರು.