SHARE

ಬೆಳಗಾವಿ: ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಯುವ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಯುವಕರಿಗಾಗಿ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದ ಕೆಂದ್ರದ ಬಿಜೆಪಿ ಸರ್ಕಾರ ಕನಿಷ್ಠ ಒಂದು ಲಕ್ಷ ಉದ್ಯೋಗವನ್ನೂ ಸೃಷ್ಟಿಸಿಲ್ಲ. ಕೇಂದ್ರ ಸರ್ಕಾರದ ವೈಫಲ್ಯವನ್ನು ರಾಜ್ಯದ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಯುವ ದೃಷ್ಟಿ- 2018 ರಾಜ್ಯಾದ್ಯಂತ ಆಯೋಜಿಸಲಾಗಿದೆ ಎಂದು ತಿಳಿಸಿದರು. ಸಂಸದರಾದ ಪ್ರತಾಪ್ ಸಿಂಹ ಹಾಗೂ ಶೋಭಾ ಕರಂದ್ಲಾಜೆ ರಾಜ್ಯದಲ್ಲಿ ಕೋಮುವಾದ ಸೃಷ್ಟಿಸುತ್ತಿದ್ದರೆ. ಯುವ ಸಮುದಾಯದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.