SHARE

ನವದೆಹಲಿ: ಕಾವೇರಿ ನದೀ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ನ ಅಂತಿಮ ತೀರ್ಪು ಶುಕ್ರವಾರ ಬೆಳಿಗ್ಗೆ ಪ್ರಕಟವಾಗಲಿದೆ.ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಬೆಳಿಗ್ಗೆ10.30ಕ್ಕೆ ತೀರ್ಪು ಪ್ರಕಟವಾಗುವ ಸಾಧ್ಯತೆಯಿದೆ. ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಸುಪ್ರೀಂಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದವು. ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿತ್ತು.ಮೇಕೆದಾಟು ಯೋಜನೆ, ಮಳೆ ಕೊರತೆಯಾಗುವ ವರ್ಷದಲ್ಲಿ ನೀರಿನ ಸಮರ್ಪಕ ಹಂಚಿಕೆ, ನದಿ ನೀರು ನಿರ್ವಹಣಾ ಮಂಡಳಿ ರಚನೆ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ. ತೀರ್ಪು ರಾಜ್ಯದ ಪರವಾಗಿ ಪ್ರಕಟವಾಗಲಿದೆ ಎಂಬುದು ರಾಜ್ಯದ ಜನರ ಆಶಯವಾಗಿದ್ದು, ಒಂದು ವೇಳೆ ವ್ಯತಿರಿಕ್ತ ತೀರ್ಪು ಪ್ರಕಟವಾದರೆ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇದೆ.

ಆದ್ದರಿಂದ ಸುಧೀರ್ಘ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ತಿಳಿಸಿದ್ದಾರೆ.