SHARE

ಬೆಳಗಾವಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 12:08 ಕ್ಕೆ ಆಗಮಿಸಿದರು. ಸಂಸತ್ತಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಒಂದು ತಾಸು ಮುಂಚಿತವಾಗಿ ಆಗಮಿಸಿ ರಾಹುಲ್ ಅವರನ್ನು ಬರಮಾಡಿಕೊಂಡರು. ನಂತರ ರಾಹುಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹೆಲಿಕಾಪ್ಟರ್ ಮೂಲಕ ಅಥಣಿಯತ್ತ ಹಾರಿದರು.ಶಾಸಕ ಫಿರೋಜ್ ಸೇಠ್, ಅಂಜಲಿತಾಯಿ ನಿಂಬಾಳಕರ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾಡಳಿತದ ವತಿಯಿಂದ ಮುಖ್ಯಮಂತ್ರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಡಿಸಿ ಎಸ್. ಜಿಯಾವುಲ್ಲಾ, ಕಮಿಷ್ಬರ್ ಡಾ. ಡಿ. ಸಿ. ರಾಜಪ್ಪ, ಡಿಸಿಪಿ ಸೀಮಾ ಲಾಟಕರ ಇತರರು ಉಪಸ್ಥಿತರಿದ್ದರು.