SHARE

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಯುತ್ತಿದೆ. ಇದು ರಾಜಕೀಯ ಪ್ರೇರಿತ ದಾಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್‌ MLC ರಘು ಆಚಾರ್ ನಿವಾಸ ಮತ್ತು ಕಚೇರಿ ಮೇಲೆ ನಡೆದ ದಾಳಿ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮೇಲೆ ಯಾಕೆ ದಾಳಿ ನಡೆಸುತ್ತಿಲ್ಲ. ಎರಡೆರಡು ನೋಟು ಎಣಿಕೆ ಯಂತ್ರ ಇಟ್ಟುಕೊಂಡಿರುವ ಈಶ್ವರಪ್ಪ ಮೇಲೆ ಯಾಕೆ ದಾಳಿಯಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಚುನಾವಣೆಯಲ್ಲಿ ಸೋಲಿನ ಭಯ ಉಂಟಾಗಿದ್ದು, ದಾಳಿ ನಡೆಸಿ ಕಾಂಗ್ರೆಸ್ ನಾಯಕರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ನಡೆಯುತ್ತಿದೆ. ಚುನಾವಣೆ ಸಂದರ್ಭ ಅತಂತ್ರ, ಅಭದ್ರತೆ ಸೃಷ್ಟಿಸುವುದು ಇದರ ಉದ್ದೇಶ ಎಂದು ಆಕ್ರೋಶ ವ್ಯಕ್ತಪಡಿಸಿದರು.