SHARE

ಜೋಧಪುರ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಜೋಧಪುರ ಸೆಷೆನ್ಸ್‌ ನ್ಯಾಯಾಲಯ ಪೂರ್ಣಗೊಳಿಸಿದೆ. ಆದರೆ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶರು ತೀರ್ಪನ್ನು ಶನಿವಾರಕ್ಕೆ ಕಾಯ್ದಿರಿಸಿದ್ದಾರೆ.

ಮತ್ತೆ ಸಲ್ಮಾನ್ ಖಾನ್ ಅವರನ್ನು ಜೋಧಪುರ ಕೇಂದ್ರೀಯ ಕಾರಾಗೃಹಕ್ಕೆ ಕಳುಹಿಸಲಾಗಿದ್ದು, ನಾಳೆ 10.30 ಕ್ಕೆ ಜಾಮೀನು ಅರ್ಜಿಯ ತೀರ್ಪು ಹೊರ ಬೀಳಲಿದೆ. ಸಲ್ಮಾನ್‌ಗೆ ಜಾಮೀನು ಸಿಗುತ್ತದೊ ಎನ್ನುವುದನ್ನು ಕಾದು ನೋಡಬೇಕಾಗಿದೆ.