SHARE

ಬೆಳಗಾವಿ: AICCಯಿಂದ ಇನ್ನೂ ಯಾವುದೇ ಅಂತಿಮ ಅಭ್ಯರ್ಥಿ ಪಟ್ಟಿಗೆ ಅನುಮೋದನೆ ದೊರೆತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಹಂತದ ಫೈನಲ್ ಪಟ್ಟಿ ಬಿಡುಗಡೆಯಾಗಿದೆ ಎಂದು ಆಸ್ಕರ್ ಫರ್ನಾಂಡಿಸ್ ಸಹಿಯುಳ್ಳ Fake List ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಸಿಎಂ ಮತ್ತು ಎಐಸಿಸಿ ರಾಜ್ಯ ಉಸ್ತುವಾರಿ ಕೆ. ಸಿ. ವೇಣುಗೋಪಾಲ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಲಿಸ್ಟ್ ಬಿಡುಗಡೆಯಾಗಿಲ್ಲ, ಯಾರೂ ಗೊಂದಲಕ್ಕೆ ಒಳಗಾಗಬಾರದು ಎಂದು ಸಿಎಂ & ಕೆ. ಸಿ. ವೇಣುಗೋಪಾಲ ಮನವಿ ಮಾಡಿದ್ದಾರೆ.