ನವದೆಹಲಿ: ಉತ್ತರಪ್ರದೇಶದ ಉನ್ನಾವೊದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗರ್ ವಿರುದ್ಧ ಕೊನೆಗೂ ಎಫ್ಐಆರ್ ದಾಖಲಾಗಿದೆ.
16 ವರ್ಷದ ಹುಡುಗಿ ಮೇಲೆ ಅತ್ಯಾಚಾರವೆಸಗಿರೋ ಆರೋಪ ಹೊತ್ತ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗರ್, 100 ಕಾರ್ಯಕರ್ತರ ಜೊತೆ ತಡರಾತ್ರಿ ಲಕ್ನೋದ ಹಿರಿಯ ಪೊಲೀಸ್ ಅಧಿಕಾರಿ ಮನೆಗೆ ಬಂದಿದ್ದಾರೆ. ನಾನು ಸರೆಂಡರ್ ಆಗ್ತೀನಿ ಎಂದು ಮಾಧ್ಯಮಗಳು ವರದಿ ಮಾಡುತ್ತಿರುವ ಕಾರಣ ಇಲ್ಲಿಗೆ ಬಂದಿದ್ದೇನೆ. ನಾನೇನೂ ತಲೆಮರೆಸಿಕೊಂಡು ಹೋಗಿಲ್ಲ ಎಂದು ಆವಾಜ್ ಹಾಕಿ ಹೋಗಿದ್ದಾರೆ ಎನ್ನಲಾಗಿದೆ.ಉನ್ನಾವೊ ಮೂಲದ ಹುಡುಗಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿದ್ದಳು. ಹುಡಗಿಯ 55 ವರ್ಷದ ತಂದೆಯನ್ನ ಶಾಸಕ ಸೆಂಗರ್ ಸಹೋದರ ಅತುಲ್ ಸಿಂಗ್ ಥಳಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ಬಳಿಕ ತಂದೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದರು. ಹೀಗಾಗಿ ಕಳೆದ ಭಾನುವಾರ ಸಿಎಂ ಯೋಗಿ ಆದಿತ್ಯನಾಥ್ ನಿವಾಸದೆದುರೇ ಹುಡುಗಿ ಆತ್ಮಹತ್ಯೆಗೆ ಯತ್ನಿಸಿದ್ದಳು. ತೀವ್ರ ಗಾಯಗಳಿಂದ ಹುಡುಗಿಯ ತಂದೆ ಪೊಲೀಸ್ ವಶದಲ್ಲಿರುವಾಗಲೇ ಸಾವನ್ನಪ್ಪಿದ್ದು, ಇದೀಗ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಬಳಿಕ ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳುವಂತೆ ಯೋಗಿ ಆದಿತ್ಯನಾಥ್ ಸರ್ಕಾರ ಪೊಲೀಸರಿಗೆ ಸೂಚಿಸಿದ್ದು, ಇದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನ ಸಿಬಿಐಗೆ ಹಸ್ತಾಂತ ರಿಸುವಂತೆ ಹೇಳಿದೆ. ಸಂತ್ರಸ್ತೆ ಹಾಗೂ ಆಕೆಯ ಕುಟುಂಬಕ್ಕೆ ಪೊಲೀಸ್ ಭದ್ರತೆ ಒದಗಿಸುವಂತೆ ಸರ್ಕಾರ ಆದೇಶಿಸಿದೆ.