SHARE

ಚಿಕ್ಕಮಗಳೂರು: ಈ ಬಾರಿಯ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದರೆ ರಾಷ್ಟ್ರೀಯ ಪಕ್ಷಗಳು ನಮ್ಮ ಮನೆ ಬಾಗಿಲಿಗೆ ಬರಬೇಕಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣಾ ಪೂರ್ವ ಸಮೀಕ್ಷೆಗಳು ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ ಎಂಬುದನ್ನು ಹೇಳುತ್ತಿವೆ. ಆದರೆ ಜೆಡಿಎಸ್ 113 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಒಂದು ವೇಳೆ ಯಾವುದೇ ಪಕ್ಷಕ್ಕೆ ಸರಳ ಬಹುಮತ ದೊರೆಯದೆ ಇದ್ದರೆ. ಅತಂತ್ರ ಫಲಿತಾಂಶ ಬಂದಲ್ಲಿ ರಾಷ್ಟ್ರೀಯ ಪಕ್ಷಗಳು ನಮ್ಮ ಮನೆ ಬಾಗಿಲಿಗೆ ಬರಬೇಕಾಗುತ್ತದೆ ಎಂದರು.

ಹಲವು ಸಮೀಕ್ಷೆಗಳ ಪ್ರಕಾರ ಜೆಡಿಎಸ್‍ಗೆ 40 ಸ್ಥಾನಗಳನ್ನು ನೀಡಲಾಗಿದೆ. ಇಷ್ಟು ಸ್ಥಾನ ನಮಗೆ ದೊರೆತರೆ ರಾಷ್ಟ್ರೀಯ ಪಕ್ಷಗಳು ಅಧಿಕಾರ ರಚನೆ ಮಾಡಲು ಸಾಧ್ಯವಾಗುವುದಿಲ್ಲ. ಜೆಡಿಎಸ್ ಬೆಂಬಲ ಅಗತ್ಯವಾಗುತ್ತದೆ. ಚುನಾವಣಾ ಪೂರ್ವ ಸಮೀಕ್ಷೆಗಳಿಗೆ ವಾಸ್ತವತೆಯ ಆಧಾರದ ಕೊರತೆಯಿದ್ದು, ಈ ಬಾರಿ ನಾಡಿನ ಜನ ಜೆಡಿಎಸ್ ಪರ ಒಲವು ತೋರುತ್ತಿದ್ದಾರೆ ಎಂದು ನುಡಿದರು.