SHARE

ಚಿಕ್ಕೋಡಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಪಡೆದು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ರಾಜ್ಯಸಭಾ ಪ್ರತಿಪಕ್ಷದ ನಾಯಕ ಗುಲಾಂ ನಭಿ ಆಜಾದ್ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದಲಿತ, ಅಲ್ಪಸಂಖ್ಯಾತರ ಮೇಲೆ ದೇಶದಲ್ಲಿ ಅತ್ಯಾಚಾರ ನಡೆಯುತ್ತಿದ್ದರೂ ಪ್ರಧಾನಿ ಮೋದಿ ಅವರು ಮಾತನಾಡುವುದಿಲ್ಲ. ಅವರಿಗೆ ಈ ಜನಾಂಗದ ಬಗ್ಗೆ ಕಾಳಜಿಯಿಲ್ಲ ಎಂದರು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಗ್ಯಾಸ್ ಬೆಲೆ ₹300 ಇತ್ತು. ಇದೀಗ ₹700ಕ್ಕೆ ಏರಿಸಿದ್ದಾರೆ ಎಂದು ಕಿಡಿಕಾರಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಸಂಸದ ಪ್ರಕಾಶ ಹುಕ್ಕೇರಿ ಭಾಗವಹಿಸಿದ್ದರು ಮತ್ತಿತರು ಉಪಸ್ತಿತರಿದ್ದರು.