SHARE

ಬೆಂಗಳೂರು: ಚುನಾವಣಾ ಫಲಿತಾಂಶ ಅತಂತ್ರವಾದ ಬಳಿಕ ಸರ್ಕಾರ ರಚನೆಗೆ ಕಸರತ್ತು ನಡೆದಿವೆ. ಅತ್ತ ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಮೈತ್ರಿ ಮಾತುಕತೆ ನಡೆಯುತ್ತಿದ್ದರೆ. ಇತ್ತ ಬಿಎಸ್ ಯಡಿಯೂರಪ್ಪ ನಾಳೆಯೇ ಬಿಜೆಪಿ ಸರ್ಕಾರ ರಚನೆಯಾಗುವುದು ಖಚಿತ ಎಂದು ಹೇಳಿದ್ದಾರೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ತೆರಳಿ ವೇಳೆ ಮಾತನಾಡಿದ ಅವರು, ಜನ ಬಿಜೆಪಿಗೆ ಆಶೀರ್ವಾದ ನೀಡಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಸಭೆ ನಡೆಯಲಿದೆ. ನಾನು ನಾಳೆಯೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ತಿಳಿಸಿದರು. ಆದರೆ. ಕಾಂಗ್ರೆಸ್ ಪಕ್ಷ ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.