SHARE

ಬೆಂಗಳೂರು: ಬಿಜೆಪಿಯ ಆಪರೇಷನ್ ವಿಫಲವಾಗಿದ್ದು, ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್, ಜೆಡಿಎಸ್ ಶಾಸಕರು ಸದನಕ್ಕೆ ಹಾಜರಾಗಿದ್ದು, ಈಗಾಗಲೇ ಶಾಸಕರು ವಿಪ್ ಪಡೆದಿದ್ದು, ವಿಪ್ ಉಲ್ಲಂಘಸಿದರೆ ಪಕ್ಷಾಂತರ ಕಾಯ್ದೆಯಡಿ 6 ವರ್ಷ ಚುನಾವಣೆಗೆ ನಿಲ್ಲುವಂತಿಲ್ಲ. ಈ ಹಿನ್ನೆಲೆ ವಿಪ್ ಉಲ್ಲಂಘಿಸಿ ಬಿಜೆಪಿಗೆ ಬೆಂಬಲಿಸಲು ತಯಾರಿಲ್ಲ. ಈ ಭಯದಲ್ಲಿ ಕಾಂಗ್ರೆಸ್​ ಶಾಸಕರು ಬಿಜೆಪಿಗೆ ಕೈ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ಯಡಿಯೂರಪ್ಪ ನೇತೃತ್ವದ ಸಭೆ ಸಹ ನಡೆದಿದ್ದು, ಕೊನೇ ಘಳಿಗೆಯಲ್ಲಿ ಹತ್ತಕ್ಕೂ ಹೆಚ್ಚು ಶಾಸಕರು ಕೈ‌ಕೊಟ್ಟ ಹಿನ್ನಲೆ. ಬಹುಮತ ಸಾಬೀತುಪಡಿಸುವುದು ಕಷ್ಟ ಎಂದು ಪರಿಗಣಿಸಿರುವ ಕೇಂದ್ರ ಬಿಜೆಪಿ ನಾಯಕರು, ಬಿ.ಎಸ್ ಯಡಿಯೂರಪ್ಪ ಅವರನ್ನು ರಾಜೀನಾಮೆಗೆ ಮಾನಸಿಕವಾಗಿ ತಯಾರಿರುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡುವ ಮುನ್ನ ಸುದೀರ್ಘ ಭಾಷಣ ಮಾಡಲು ಸಿದ್ಧತೆ ನಡೆಸಿದ್ದು, ಇದಕ್ಕಾಗಿ 13 ಪುಟಗಳ ಭಾಷಣ ತಯಾರಿಸಲಾಗಿದೆ ಎಂದು ತಿಳಿದು ಬಂದಿದೆ.