SHARE

ಬೆಂಗಳೂರು: ರೈತರ ಸಾಲ ಮನ್ನಾ ವಿಷಯದಲ್ಲಿ ನಾನು ಯಾವುದೇ ಯೂ ಟರ್ನ್ ಹೊಡೆದಿಲ್ಲ. ರೈತರು ಸಾಲಮನ್ನಾ ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಾಲ ಮನ್ನಾ ಘೋಷಣೆಗೆ ಮುನ್ನ ನನ್ನ ಸಹವರ್ತಿ ಪಕ್ಷದೊಂದಿಗೆ ಮಾತುಕತೆ ನಡೆಸಬೇಕಾಗುತ್ತದೆ. ಆದ್ದರಿಂದ ರೈತರು ಆತಂಕ ಪಡುವ ಅಗತ್ಯವಿಲ್ಲ. ರಾಷ್ಟ್ರೀಕೃತ ಬ್ಯಾಂಕ್ ಮಾತ್ರವಲ್ಲ ಖಾಸಗಿಯವರ ಬಳಿಯೂ ರೈತರು ಮಾಡಿರುವ ಸಾಲ ಮನ್ನಾ ಮಾಡುವ ಚಿಂತನೆ ಇದೆ ಎಂದು ಹೇಳಿದ್ದಾರೆ.

ನಾನು ಅವಕಾಶವಾದಿ ರಾಜಕಾರಣಕ್ಕಾಗಿ ಮುಖ್ಯಮಂತ್ರಿ ಆಗುತ್ತಿಲ್ಲ. ಜನ‌ಬೆಂಬಲ ಕೊಡದೇ ಇದ್ದರೂ ದೇವರ ದಯೆಯಿಂದ ಮುಖ್ಯಮಂತ್ರಿ ಆಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.