SHARE

ಬೆಂಗಳೂರು: ವಿಧಾನಸಭೆ ಸ್ಪೀಕರ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಸುರೇಶ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸಭಾ ಕಾರ್ಯದರ್ಶಿ ಎಸ್.ಮೂರ್ತಿ ಅವರನ್ನು ಭೇಟಿಯಾದ ಸುರೇಶ್ ಕುಮಾರ್ ಸ್ಪೀಕರ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ನ ಹಿರಿಯ ಶಾಸಕ ರಮೇಶ್ ಕುಮಾರ್ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಅಂತಿಮಗೊಳಿಸಲಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆಯಲು ಬಿಜೆಪಿ ಸುರೇಶ್ ಕುಮಾರ್ ಅವರನ್ನು ಕಣಕ್ಕಿಳಿಸಿದೆ.