SHARE

ವಿಜಯಪುರ: ಬುರ್ಖಾ ಧರಿಸಿದವರು, ಟೋಪಿ ಹಾಕಿಕೊಂಡವರು ನನ್ನ ಬಳಿ ಬರಬೇಡಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನನಗೆ ಹಿಂದೂಗಳೂ ಮಾತ್ರ ವೋಟ್ ಮಾಡಿದ್ದಾರೆ ಆದ್ದರಿಂದ ಕಾರ್ಪೊರೇಟರ್ಗಳು ಹಿಂದೂ ಪರವಾಗಿ ಕೆಲಸ ಮಾಡಿ ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿರುವ ಶಾಸಕ ಬಸನಗೌಡ ಪಾಟೀಲ್ ತಮ್ಮ ಕ್ಷೇತ್ರದಲ್ಲಿ ಕೋಮು ದ್ವೇಷ ಭಾವನೆ ಪ್ರೋತ್ಸಾಹ ನೀಡಿದ್ದಾರೆ.

ಹಿಂದೂಗಳಿಗೆ ಯಾವುದೇ ರೀತಿಯ ತೊಂದರೆಗಳನ್ನು ನೀಡಬಾರದು ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.