SHARE

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಆರಂಭಿಕ ಹಂತದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಸೌಮ್ಯ ರೆಡ್ಡಿ ಅವರು ಬಿಜೆಪಿ‌ ಅಭ್ಯರ್ಥಿ ಪ್ರಹ್ಲಾದ್ ಬಾಬು ವಿರುದ್ಧ 2,889 ಮತಗಳ ಅಂತರದ ಗೆಲುವು ಪಡೆದಿದ್ದು, ಈ ಮೂಲಕ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಜಯನಗರದ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಸೌಮ್ಯ ರೆಡ್ಡಿ 54,457 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರೆ. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ಅವರು 51,568 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ರವಿ ಕೃಷ್ಣ ರೆಡ್ಡಿಯವರು ಕೇವಲ 1,861 ಮತಗಳನ್ನು ಪಡೆದು ಠೇವಣಿ ಕಳೆದುಕೊಂಡಿದ್ದಾರೆ. ಬಿಜೆಪಿ ಭದ್ರಕೋಟೆಯೆಂದು ಹೇಳಲಾಗುತ್ತಿದ್ದ ಜಯನಗರ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್‌ ತನ್ನ ವಶಕ್ಕೆ ಪಡೆದಿದೆ.