SHARE

ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪರಶುರಾಮ ವಾಗ್ಮೋರೆ ವಿಚಾರಣೆ ಜೋರಾಗಿದೆ. ಬಂಧಿತ ಶಂಕಿತ ಆರೋಪಿ ಪರಶುರಾಮ್ ವಾಗ್ಮೋರೆ ಅವರನ್ನು ಬೆಳಗಾವಿ ಜಿಲ್ಲೆಯ ಅಜ್ಞಾರ ಅರಣ್ಯ ಪ್ರದೇಶದಲ್ಲಿ ಕರೆತಂದು ಈಗ ಎಸ್ ಐಟಿ ಅಧಿಕಾರಿಗಳು ಆತನ ಚಲನವಲನಗಳ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಗೌರಿ ಹತ್ಯೆಗೂ ಮೊದಲು ವಾಗ್ಮೋರೆ ಬೆಳಗಾವಿ ಜಿಲ್ಲೆಯ ಗಡಿ ಭಾಗದ ನಿರ್ಜನ ಪ್ರದೇಶಗಳಲ್ಲಿ ಬಂದೂಕು ತರಬೇತಿ ಪಡೆದಿದ್ದನು ಎಂಬ ವಿಚಾರ ತಾನೇ ಅಧಿಕಾರಿಗಳ ಎದುರು ಬಾಯಿಬಿಟ್ಟ ಕಾರಣ ಎಸ್​ಐಟಿ ಅಧಿಕಾರಿಗಳು ಈಗ ಆ ತರಬೇತಿ ಸ್ಥಳದ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗಾವಿ ನಗರ ಇಲ್ಲವೇ ಜಿಲ್ಲೆಯ ಪೊಲೀಸರಿಗೆ & ಅರಣ್ಯ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಎಸ್ ಐಟಿ ಬಿಟ್ಟುಕೊಟ್ಟಿಲ್ಲ ಎನ್ನಲಾಗಿದೆ.

ವಾಗ್ಮೋರೆಯನ್ನು ಖಾನಾಪುರ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ವಿಚಾರಣೆ ನಡೆಸಲಿದ್ದಾರೆ ಎನ್ನಲಾಗುತ್ತಿದ್ದು, ಅರಣ್ಯಾಧಿಕಾರಿಗಳು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಪಷ್ಠಪಡಿಸಿದ್ದಾರೆ. ವಾಗ್ಮೋರೆ ವಿರುದ್ಧ ಆರ್ಮ್ಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.