SHARE

ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸಚಿವ ಹೆಚ್.ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದು ಖಚಿತ ಎಂದು ಜೆಡಿಎಸ್ ವರಿಷ್ಠ ಹೆಚ್‌.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಹಾಸನದ ತಮ್ಮ ಊರು ಹರದನಹಳ್ಳಿಯ ತಮ್ಮ ಮನೆಯಲ್ಲಿ ಶ್ರಾವಣ ಸೋಮವಾರದ ಪ್ರಯುಕ್ತ ಬೆಳಿಗ್ಗೆ ಪೂಜೆ ಸಲ್ಲಿಸಲು ಆಗಮಿಸಿದ್ದ ಸಂದರ್ಭ ಮಾತನಾಡಿದ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಖಚಿತ. ಆದರೆ, ಎಲ್ಲಿಂದ ಸ್ಪರ್ಧಿಸಬೇಕು ಎಂಬುದನ್ನು ಇನ್ನೂ ನಿರ್ಧಾರ ಮಾಡಿಲ್ಲ ಎಂದು ದೇವೇಗೌಡ ತಿಳಿಸಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಗಟ್ಟಿಯಾಗಿದೆ. ಅದನ್ನು ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಲೋಕಸಭೆ ಚುನಾವಣೆ ಮುಗಿದ ಬಳಿಕವೂ ಸುಸೂತ್ರವಾಗಿ ನಡೆಯಲಿದೆ ಎಂದರು. ಹಾಗೆ ಕುಮಾರಸ್ವಾಮಿ ಇಷ್ಟು ಬೇಗ ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ. ಇನ್ನೂ ಹತ್ತು ವರ್ಷ ರಾಜ್ಯ ರಾಜಕಾರಣದಲ್ಲಿಯೇ ಇರುತ್ತಾರೆ ಎಂದು ತಿಳಿಸಿದರು.