SHARE

ಬೆಳಗಾವಿ: VRL ವಿಜಯಾನಂದ ಬಸ್ ಪಲ್ಟಿಯಾಗಿ ಆರು ಜನರಿಗೆ ಗಾಯವಾಗಿ ಒಬ್ಬ ಗಂಭೀರವಾಗಿರುವ ಘಟನೆ ನಡೆದಿದೆ. ಬೆಳಗಾವಿಯ ಸುವರ್ಣ ವಿಧಾನ ಸೌಧದ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಘಟನೆ ನಡೆದಿದೆ.ಬೆಂಗಳೂರಿನಿಂದ ಪುಣೆಗೆ ಹೊಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಆರು ಜನ ಪ್ರಯಾಣಿಕರು ಗಾಯಗೊಂಡು, ಚಾಲಕನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.