SHARE

ಬೆಳಗಾವಿ: ಹೊಲದಲ್ಲಿ ಕೆಲಸ ನಿರ್ವಹಿಸುತ್ತಿದ್ದ ರೈತನೊಬ್ಬ ಕರೆಂಟ್ ವೈರ್ ತಗುಲಿ ಇಂದು ಸಾವಿಗೀಡಾದ ಘಟನೆ ಅಲಾರವಾಡದಲ್ಲಿ ನಡೆದಿದೆ. ಮೃತನ ಹೆಸರು ಅಣ್ಣಪ್ಪ(೫೨)ಎಂದು ತಿಳಿದುಬಂದಿದೆ. ಬೆಳಗಾವಿ ಉತ್ತರ ಶಾಸಕ ಅನಿಲ ಬೆನಕೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡು, ಕುಟುಂಬಕ್ಕೆ ಸಾಂತ್ವನ ಹೇಳಿದರು. ಹೆಸ್ಕಾಂ ಅಧಿಕಾರಿಗಳು ಮತ್ತು ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿದರು.