SHARE

ಬೆಳಗಾವಿ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸಿಎಂ ಆಗಮನದ ಮುನ್ನಾದಿನ ಪ್ರತಿಭಟನೆ ನಡೆಸಿದ ರೈತರನ್ನು ಮುಂಜಾಗೃತಾ ಕ್ರಮವಾಗಿ ವಶಕ್ಕೆ ಪಡೆದು ಬಿಡುಗಡೆಗೊಳಿಸಲಾಯಿತು.ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಇಳಿದ ರೈತರು ಸರಕಾರದ ವಿರುದ್ಧ ಘೋಷಣೆ ಕೂಗಿದರು. ಸಚಿವ ರಮೇಶ ಜಾರಕಿಹೊಳಿ ರೈತರ ಕಬ್ಬಿನ ಬಾಕಿ ಬಿಲ್ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಹುದಶಕಗಳ ಮಹಾದಾಯಿ ಕಳಸಾ ಬಂಡೂರಿ ಯೋಜನೆ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಗೆ ಆಗ್ರಹಿಸಿದರು.ಕಲಂ 144 ನಿಷೇದಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ಪ್ರತಿಭಟನೆಗೆ ಸೇರುತ್ತಿದ್ದ ರೈತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಲಾಯಿತು. ವಶಕ್ಕೆ ಪಡೆಯುವ ವೇಳೆ ಪೊಲೀಸರು ಹಾಗೂ ಸರಕಾರದ ವಿರುದ್ಧ ಘೋಷಣೆ ಕೂಗಿದರು.