SHARE

ಬೆಳಗಾವಿ: ಸಾಂಗಲಿ ಜಿಲ್ಲೆಯ ಕವಲಾಪುರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಳಿದರು‌. ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತ ಡಾ. ಡಿ. ಸಿ. ರಾಜಪ್ಪ ಮುಖ್ಯಮಂತ್ರಿಯನ್ನು ಆಹ್ವಾನಿಸಿ ಬೀಳ್ಕೊಟ್ಟರು. ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಮುಖ್ಯಮಂತ್ರಿ, ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ಮಿರಜ ತಾಲೂಕಿನ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ರಾತ್ರಿ 8ಕ್ಕೆ ಬೆಳಗಾವಿಯಿಂದ ಮುಂಬೈನತ್ತ ಮುಖ್ಯಮಂತ್ರಿ ಹಾರಲಿದ್ದಾರೆ.