SHARE

ಜಮಖಂಡಿ: ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮೊದಲ ಹಂತದ ಮತ ಎಣಿಕೆಯಿಂದಲೂ ಮುನ್ನಡೆ ಸಾಧಿಸಿದ್ದ ಆನಂದ ನ್ಯಾಮಗೌಡ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಎದುರು ನಿರೀಕ್ಷೆಯಂತೆ ಜಯ ಗಳಿಸಿದ್ದಾರೆ.

ಜಮಖಂಡಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಹಾಗೂ ಕೈ ಅಭ್ಯರ್ಥಿ ಆನಂದ ನ್ಯಾಮಗೌಡ ನೇರ ಪೈಪೋಟಿ ಏರ್ಪಟ್ಟಿತ್ತು. ಆದ್ರೆ ಜಮಖಂಡಿ ಮತದಾರರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಇದರಿಂದ ಬಿಜೆಪಿಗೆ ಮುಖಭಂಗವಾಗಿದೆ.