SHARE

ಧಾರವಾಡ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದ ಬಳಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ‌ ಸಂಭವಿಸಿದೆ.

ಘಟನೆಯಲ್ಲಿ ಆರು ಜನ ಸಾವನ್ನಪ್ಪಿದ್ದು, 21 ಜನ ಗಂಭೀರ ಗಾಯಗೊಂಡಿದ್ದಾರೆ. ಮುಂಬೈನಿಂದ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಹುಬ್ಬಳ್ಳಿಯಿಂದ ಹಂಪಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಗದಗ ಮಾರ್ಗವಾಗಿ ಹಂಪಿ ಕಡೆ ತೆರಳುತ್ತಿದ್ದ ಬಸ್ಸು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲಿಸರು ಭೇಟು ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ರವಾನಿಸಲಾಗಿದ್ದು, ವಿಶ್ವನಾಥ್ ಮೇಸ್ತ್ರಿ, ದಿನಕರ್ ಮೇಸ್ತ್ರಿ, ರಮೇಶ್ ಜೈಪಾಲ್, ಸಿಮೇಧಾ, ಲವೋ ಕೇಲ್ಕರ್, ಸುಚಿತ್ರ ರಾಹುಲ್ ಎಂಬುವವರು ಮೃತಪಟ್ಟಿದ್ದಾರೆ.