SHARE

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ಬಳಲಿ ಮಂಡ್ಯದ ಗಂಡು ಅಂಬರೀಶ್ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಗೆ ಸಿಲುಕಿ ಅಂಬರೀಶ್ ಶನಿವಾರ ಸಂಜೆ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಕುಟುಂಬದವರು ವಿಕ್ರಂ ಆಸ್ಪತ್ರೆಗೆ ದಾಖಲಿಸಿದರು.ಅಂಬರೀಶ್​ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯತ್ತ ಚಿತ್ರರಂಗ ಹಾಗೂ ಸಾವಿರಾರು ಅಭಿಮಾನಿಗಳು ಜಮಾಯಿಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ.