SHARE

ನವದೆಹಲಿ: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ರಾಜ್ಯದ ಸಂಸದರು ಪ್ರತಿಭಟನೆ ನಡೆಸಿದರು. ದೆಹಲಿಯ ಸಂಸತ್​ ಭವನದ ಬಳಿ ಗಾಂಧಿ ಪ್ರತಿಮೆ ಬಳಿ ರಾಜ್ಯದ ಎಲ್ಲಾ ಪಕ್ಷಗಳ ಸಂಸದರು ಮೇಕೆದಾಟು ಯೋಜನೆಗಾಗಿ ಒಗ್ಗಟ್ಟು ಪ್ರದರ್ಶಿಸಿ ಮೇಕೆದಾಟು ಯೋಜನೆಯನ್ನು ಬಲವಾಗಿ ಸಮರ್ಥಿಸಿಕೊಂಡರು. ಹಾಗೆ ಮೇಕೆದಾಟು ಯೋಜನೆಯನ್ನು ತ್ವರಿತಗತಿಯಲ್ಲಿ ಜಾರಿಗೆ ಮಾಡಬೇಕು ಎಂದು ಒತ್ತಾಯಿಸಿದರು.ಸಂಸದರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಸಂಸದ ಡಿ.ಕೆ ಸುರೇಶ್, ಎಲ್. ಆರ್ ಶಿವರಾಮೇಗೌಡ, ದ್ರುವ ನಾರಾಯಣ್, ಜಿ.ಎಂ.ಸಿದ್ದೇಶ್, ಭಗವಂತ ಕೂಬಾ, ಪ್ರಕಾಶ್ ಹುಕ್ಕೇರಿ, ಸುರೇಶ್ ಅಂಗಡಿ, ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್, ಕುಪೇಂದ್ರರೆಡ್ಡಿ, ಜಯರಾಮ್ ರಮೇಶ್, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಸದರು, ರಾಜ್ಯಸಭಾ ಸದಸ್ಯರು ಭಾಗಿಯಾಗಿದ್ದರು.