SHARE

ಬೆಂಗಳೂರು/ಬೆಳಗಾವಿ: ಕರ್ನಾಟಕ‌ ಸರ್ಕಾರದ ಸಂಸದೀಯ ಕಾರ್ಯದರ್ಶಿಯಾಗಿ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳಕರ ಇಂದು ಪ್ರಮಾಣವಚನ ಸ್ವೀಕರಿಸಿದರು.
ಇಂದು ಬೆಳಿಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ‌ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ನೂತನವಾಗಿ ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ವಿಧಾನ ಪರಿಷತ್ ಸದಸ್ಯರಾದ ಕೆ.ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜಾ, ಕೆ.ಗೋವಿಂದರಾಜು ಹಾಗೂ ವಿಧಾನಸಭಾ ಸದಸ್ಯರಾದ ಡಾ: ಅಂಜಲಿ ಹೇಮಂತ್ ನಿಂಬಳ್ಕರ್, ಕೌಜಲಗಿ ಮಹಾಂತೇಶ್ ಶಿವಾನಂದ, ರೂಪಕಲಾ.ಎಂ.ಶಶಿಧರ್, ಕೆ.ರಾಘವೇಂದ್ರ ಬಸವರಾಜ್ ಹಿತ್ನಾಳ್ ಹಾಗೂ ಡಿ.ಎಸ್.ಹೂಲಗೇರಿಯವರಿಗೆ ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣವಚನ ಬೋಧಿಸಿದರು.ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ:ಜಿ.ಪರಮೇಶ್ವರ್, ರೇಷ್ಮೆ ಸಚಿವ ಸಾ.ರಾ.ಮಹೇಶ್, ಶಾಸಕರು ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷರೂ ಆದ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ;ಇ.ವಿ.ರಮಣರೆಡ್ಡಿ, ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ದ್ವಾರಕಾನಾಥ್ ಬಾಬು ಉಪಸ್ಥಿತರಿದ್ದರು.