SHARE

ಬೆಂಗಳೂರು: ಚಿತ್ರರಸಿಕರ ಹುಚ್ಚೆಬ್ಬಿಸಲು ಸಜ್ಜಾಗಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರನ ಚಲನಚಿತ್ರದ ಪ್ರೀಮಿಯರ್ ಶೋ ಇಂದು ರಾಜಕೀಯ ನಾಯಕರ ಏಕತೆಗೆ ಸಾಕ್ಷಿಯಾಯಿತು.ರಾಜ್ಯಾದ್ಯಂತ ನಾಳೆ ಬಿಡುಗಡೆಯಾಗುತ್ತಿರುವ ‘ಸೀತಾರಾಮ ಕಲ್ಯಾಣ’ ಚಿತ್ರದ ಪೂರ್ವ ಭಾವಿ ಪ್ರದರ್ಶನದಲ್ಲಿ ಎಲ್ಲ ಪಕ್ಷಗಳ ನಾಯಕರು ಹಾಗೂ ಶಾಸಕರೊಂದಿಗೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಚಿತ್ರ ವೀಕ್ಷಿಸಿದರು.ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಕೆ. ಎಸ್. ಈಶ್ವರಪ್ಪ , ಸಚಿವ ಬಿ. ಜೆಡ್. ಜಮೀರ್ ಅಹ್ಮದ್ ಇತರರು ಭಾಗವಹಿಸಿದರು.