SHARE

ಬೆಳಗಾವಿ: ದೇಶದ ನ್ಯಾಯವಾದಿಗಳ ಕಲ್ಯಾಣಕ್ಕೆ ಕೇಂದ್ರ ಸರಕಾರ ಯಾವುದೇ ಸೂಕ್ತ ನಿರ್ಧಾರ ತಳೆಯಲು ವಿಫಲವಾಗಿದೆ ಎಂದು ಆರೋಪಿಸಿ ಬೆಳಗಾವಿ ಬಾರ್ ಅಸೋಸಿಯೇಷನ್ ಪ್ರತಿಭಟನೆ ನಡೆಸಿ ಪ್ರಧಾನಿಗೆ ಮನವಿ ರವಾಣಿಸಿದೆ.

ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ರವಾಣಿಸಿತು. ಪ್ರಧಾನಿ ತಾವೇ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲರಾಗಿದ್ದಾರೆ. ಭಾರತೀಯ ಬಾರ್ ಅಸೋಸಿಯೇಷನ್ ಅಧ್ಯಕ್ಷರಿಗೆ ಸೂಕ್ತ ಭರವಸೆ ನೀಡುವಲ್ಲಿ ಕೇಂದ್ರ ವಿಫಲವಾಗಿದೆ ಎಂದು ದೂರಿದರು. ಬೆಳಗಾವಿ ಬಾರ್ ಅಸೋಸಿಯೇಷನ್ ಪದಾಧಿಕಾರಿಗಳು, ವಕೀಲರು ಭಾಗವಹಿಸಿದರು.