SHARE

ವಿಜಯಪುರ: ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಅಧಿಕಾರಿಗಳ ಚಳಿ‌ಬಿಡಿಸಿದ್ದಾರೆ. ನಗರದ ಬಿಎಲ್ ಡಿ ಇ‌ ಕಾಲೇಜು ಬಳಿ ಇರುವ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ದಿ ನಿಗಮದ ಎಕ್ಸಿಕ್ಯೂಟಿವ್ ಇಂಜಿನಿಯರ್ ಶರದ್ ಇಜೇರಿ ಮನೆ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡಿದ್ದಾರೆ. ಐದು ವಾಹನಗಳಲ್ಲಿ ಆಗಮಿಸಿ ಬಾಗಲಕೋಟೆ ಎಸಿಬಿ ಸಿಪಿಐ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ. ಇಜೇರಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಎಸಿಬಿಗೆ ದೂರು ಸಲ್ಲಿಕೆಯಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ನಗರದ ಚಾಲುಕ್ಯ ನಗರದಲ್ಲಿರುವ ಅಧಿಕಾರಿ ನಿವಾಸದ ಮೇಲೆ ದಾಳಿ ನಡೆದಿದ್ದು, ದಾಖಲೆ ಪರಿಶೀಲನೆ ನಡೆಯುತ್ತಿದೆ.