SHARE

ಬೆಂಗಳೂರು: ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಗೆಲ್ಲಬಾರದು ಎಂಬ ಉದ್ದೇಶದಿಂದ ನಾವು ಒಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ. ಎದುರಾಳಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಲೋಕಸಭೆ ಚುನಾವಣಾ ಪ್ರಚಾರ ಸೇರಿದಂತೆ ಹಲವು ವಿಚಾರಗಳ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಮೈತ್ರಿ ಪಕ್ಷಗಳ ನಾಯಕರ ಸಭೆ ನಡೆಯಿತು. ಸಭೆ ಬಳಿಕ ಸಿದ್ದರಾಮಯ್ಯ ಮಾತನಾಡಿದರು, ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳು ಒಟ್ಟಾಗಿ, ಪರಿಣಾಮಕಾರಿ ಪ್ರಚಾರ ಮಾಡಬೇಕೆಂದು ಸುಧೀರ್ಘ ಚರ್ಚೆ ನಡೆಸಿದ್ದೇವೆ ಎಂದರು. ಸಮ್ಮಿಶ್ರ ಸರ್ಕಾರ ರಚನೆಯಾದ ಸಂದರ್ಭದಲ್ಲೇ ಒಟ್ಟಿಗೆ ಚುನಾವಣಾ ಪ್ರಚಾರ ಮಾಡುವ ನಿರ್ಧಾರವನ್ನು ಮಾಡಲಾಗಿತ್ತು. ಬಿಜೆಪಿಯನ್ನು ಒಟ್ಟಾಗಿ ಎದುರಿಸಿ ಎರಡು ಅಧಿಕ ಸ್ಥಾನ ಗೆಲ್ಲಬೇಕೆಂಬುದನ್ನು ನಾವು ಆಗಾಲೇ ಚರ್ಚಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಮೈತ್ರಿ ಸರ್ಕಾರ ರಚನೆಯಾದ ಬಳಿಕ ನಡೆದ ಉಪಚುನಾವಣೆಯಲ್ಲೂ ನಾವು ಒಂದಾಗಿ ಚುನಾವಣೆ ಎದುರಿಸಲಾಗತ್ತು. ಆದರೆ. ಶಿವಮೊಗ್ಗದಲ್ಲಿ ಮಾತ್ರ ನಾವು ಸೋತೆವು. ಉಳಿದ ಕ್ಷೇತ್ರಗಳಲ್ಲಿ ಭಾರೀ ಅಂತರ ಗೆಲುವು ಪಡೆದಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಸಂಪೂರ್ಣ ಸೋಲಿಸಬೇಕು ಎಂದು ಜೊತೆಯಾಗಿದ್ದೇವೆ ಎಂದರು. ಬಿಜೆಪಿಯವರು ಕಾಂಗ್ರೆಸ್​ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಟೀಕಿಸಿದ್ದರು. ಆದರೆ, ಅದು ಎಂದೂ ಸಾಧ್ಯವಿಲ್ಲ. ಕರ್ನಾಟಕದಲ್ಲಿ ಜ್ಯಾತ್ಯಾತೀತ ತತ್ವದ ಮೇಲೆ ನಂಬಿಕೆ ಇಟ್ಟ ಮತದಾರರೇ ಹೆಚ್ಚು. ಬಿಜೆಪಿಯನ್ನು ಸೋಲಿಸಲು ನಾವು ಒಗ್ಗೂಡಿದ್ದೇವೆ ಎಂದು ಹೇಳಿದ್ದಾರೆ.

ಮೈತ್ರಿ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೇರಡು ದಿನಗಳಲ್ಲಿ ಘೋಷಣೆ ಮಾಡುವುದಾಗಿ ಹೇಳಿದ ಅವರು, ರಾಜ್ಯದ ಎಲ್ಲ ಜಿಲ್ಲಾ ಘಟಕದ ಅಧ್ಯಕ್ಷರು, ಕಾರ್ಯಕರ್ತರು ಸೇರಿದಂತೆ ಎಲ್ಲರಿಗೂ ಜೊತೆಯಾಗಬೇಕು ಎರಡೂ ಪಕ್ಷದ ನಾಯಕರು ಭಿನ್ನಾಭಿಪ್ರಾಯ ಮರೆತು ಬಿಜೆಪಿ ವಿರುದ್ಧ ಒಟ್ಟಾಗಿ ಕೆಲಸ ಮಾಡಬೇಕು ಎಂದರು.