SHARE

ಬೆಳಗಾವಿ : ಬೆಳಗಾವಿಯಲ್ಲಿ ಲೋಕಸಭಾ ಚುನಾವಣೆಯು ರಂಗೇರಿದ್ದು ಕಾಂಗ್ರೆಸ್ ಅಭ್ಯರ್ಥಿ ವಿರಪಾಕ್ಷ ಸಾಧುನ್ನವರ ನೂರಾರು ಕಾರ್ಯಕರ್ತರೊಂದಿಗೆ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಬೆಳಗಾವಿಯಲ್ಲಿ ಲೋಕಸಭಾ ಚುನಾವಣೆಯ ಕಾವು ಭುಗಿಲೆದ್ದಿದೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಜೋರಾಗಿಯೇ ಇದ್ದು ಕಾಂಗ್ರೇಸ್ ಷಕ್ಷದ ಅಭ್ಯರ್ಥಿ ವೀರಪಾಕ್ಷ ಸಾಧುನವರ ನೂರಾರು ಕಾರ್ಯಕರ್ತರು ಮತ್ತು ಸ್ಥಳಿಯ ನಾಯಕರ ಬೆಂಬಲದೊಂದಿಗೆ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಗರದ ಆರ್.ಟಿ.ಓ ವೃತ್ತದಿಂದ ರ್ಯಾಲಿಯನ್ನು ಪ್ರಾರಂಭಿಸಿ ಚೆನ್ನಮ್ಮ ವೃತ್ತದಲ್ಲಿರುವ ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು ಬಳಿಕ ನೂರಾರು ಕಾರ್ಯಕರ್ತರೊಂದಿಗೆ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು
ಬಳಿಕ ಮಾಧ್ಯಮಗಳೊಂದಿಗೆ  ಮಾತನಾಡಿ ಇಲ್ಲಿಯವರೆಗೆ ಮಾಡಿದ ಸಮಾಜ ಸೇವೆಗಳನ್ನು ಆಧಾರವಾಗಿಟ್ಟುಕೊಂಡು ಕಣಕ್ಕಿಳಿಯಲಿದ್ದೇನೆ. ಕಾಂಗ್ರೆಸ್ ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ಟಕೇಟ ಕೊಟ್ಟಿದ್ದು 1ಲಕ್ಷ ಮತಗಳ ಅಂತರದಲ್ಲಿ ಗೆಲವು ಸಾಧಿಸುತ್ತೇನೆ ಎಂದರು ಕಾಂಗ್ರೆಸ್ ಪಕ್ಷದ ಅಜೆಂಡಾದೊಂದಿಗೆ ಸ್ಥಳಿಯ ಸಮಸ್ಯೆಗಳಾದ ಕಳಸಾ ಬಂಡೂರಿ ಯೋಜನೆಯ ಬಗ್ಗೆ ಹೋರಾಟ ಮಾಡುತ್ತೇನೆ. ನಿರುದ್ಯೋಗ, ರೈತರ ಸಮಸ್ಯೆಗಳನ್ನು ಗಮನದಲ್ಲಿಟ್ಟುಟೊಂಡು ಪರಿಹಾರಕ್ಕಾಗಿ ಕಾರ್ಯನಿರ್ವಹಿಸಲಿದ್ದೇನೆ ಎಂದರು. ಒಟ್ಟಿನಲ್ಲಿ ಸ್ಥಳಿಯ ನಾಯಕರ ಬೆಂಬಲದೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಿ ಗೆಲವು ಶತಸಿದ್ದ ಎಂದು ಘಂಟಾಘೋಷವಾಗಿ ಹೇಳುವುದರ ಮೂಲಕ ಕಣಕ್ಕಿಳದಿದ್ದಾರೆ ಈ ಸಂದರ್ಭದಲ್ಲಿ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ, ಮಾಜಿ ಶಾಸಕ ಫಿರೋಜ ಸೇಠ, ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ, ರಾಜು ಸೇಠ ಸೇರಿದಂತೆ ಇನ್ನಿತರ ನಾಯಕರು ಸಾಥ ನೀಡಿದರು