SHARE

ಬೆಂಗಳೂರು: ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ಇಂದು ಒಂದು ದಿನ ರಜೆ ಘೋಷಿಸಲಾಗುವುದು. ಹಾಗೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗುವುದು ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಈ ಹಿಂದೆ ನಿಧನರಾದ ಇತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಗೌರವಾರ್ಥ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಕಾರ್ನಾಡ್ ಅವರ ಗೌರವಾರ್ಥವಾಗಿ ಕೈಗೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.