SHARE

ಬೆಂಗಳೂರು: ಬಿಎಸ್​​ ಯಡಿಯೂರಪ್ಪ ಇಂದು ನಾಲ್ಕನೇ ಬಾರಿಗೆ ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 6 ಗಂಟೆ ಪ್ರಮಾಣವಚನಕ್ಕೆ ಸಮಯ ನಿಗದಿಯಾಗಿದೆ. ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಲಿದ್ದಾರೆ. ಪುತ್ರ ರಾಘವೇಂದ್ರ, ಶಾಸಕರಾದ ರಘುಪತಿ ಭಟ್ ಸಹಿತ ಹಲವು ಶಾಸಕರೊಂದಿಗೆ ರಾಜ್ಯಪಾಲರನ್ನ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ರು. ಇನ್ನು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರಿಗೆ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇನೆ ಎಂದು ಹೇಳಿದ್ರು.