SHARE

ಬೆಳಗಾವಿ: ಕೇಂದ್ರ ಗೃಹ ಮಂತ್ರಿರಿಂದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದು, ವೈಮಾನಿಕ ಸಮೀಕ್ಷೆ ಬಳಿಕ ರಾಜ್ಯದ ಹಿರಿಯ ಅಧಿಕಾರಿಗಳ ಜತೆಗೆ ವಿಮಾನ ನಿಲ್ದಾಣದ ಸಭಾ ಭವನದಲ್ಲಿ ಸಭೆ ನಡೆಸಲಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆಯ ಪ್ರಹ್ಲಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಐಜಿಪಿ ಎಚ್.ಜಿ.ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯತ ಸಿಇಓ ಡಾ.ರಾಜೇಂದ್ರ ಕೆ.ವಿ. ಉಪಸ್ಥಿತರಿದ್ದರು.