SHARE

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಶ್ರೀ ಬೀಷ್ಟಾದೇವಿ ಜಾತ್ರೆಯು ಅಕ್ಟೋಬರ್ 7 ರಿಂದ 14 ರವರೆಗೆ ನಡೆಯಲಿದೆ. ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ದೇವಸ್ಥಾನಗಳಲ್ಲಿ ದೇವರ ಹೆಸರಿನಲ್ಲಿ ಪ್ರಾಣಿಗಳ ಬಲಿ ನೀಡುವುದು ಹಾಗೂ ಜೀವಂತ ಪ್ರಾಣಿಗಳ ತೂರಾಟವನ್ನು ಕಾನೂನಿಗೆ ವಿರೋಧವಾಗಿರುವುದರಿಂದ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಯಾವುದೇ ರೀತಿಯ ಪ್ರಾಣಿ-ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಗಳಾದ ಡಾ ಎಸ್.ಬಿ.ಬೊಮ್ಮನಹಳ್ಳಿ ಅವರು ಆದೇಶ ಹೊರಡಿಸಿದ್ದಾರೆ.