SHARE

ಬೆಳಗಾವಿ: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಬೆಳಗಾವಿಯ ಮುಕ್ತಾರಹುಸೇನ್ ಪಠಾಣ ಅವರನ್ನು ನೇಮಕ ಮಾಡಲಾಗಿದೆ. ಇಂದು ಬೆಂಗಳೂರಿನಲ್ಲಿ ನಡೆದ ನಿಗಮದ ಕಚೇರಿಯಲ್ಲಿ ಪಠಾಣ ಅವರು ಅಧಿಕಾರ ವಹಿಸಿಕೊಂಡರು.

ಮುಖ್ತಾರ ಹುಸೇನ್ ಪಠಾಣ ಬಿಜೆಪಿ ಅಲ್ಪಸಂಖ್ಯಾತರ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಹ ಆಗಿದ್ದಾರೆ. ರಾಜ್ಯ ಸರ್ಕಾರ ನಿನ್ನೆ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಇದು ಸಚಿವ ಸ್ಥಾನಕ್ಕೆ ಸಮನಾಗಿದೆ.
ಮುಖ್ತಾರ ಹುಸೇನ್ ಫಕ್ರುದ್ದೀನ್ ಪಠಾಣ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅವರ ಪಕ್ಷ ನಿಷ್ಠೆ, ಸೇವೆಯನ್ನು ಗುರುತಿಸಿ ಅವರನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಲಾಗಿದೆ. ರಾಜ್ಯಪಾಲರ ಆದೇಶದ ಮೇರೆಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಕ್ರಮ ಭಾಷಾ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.