SHARE

ಬೆಂಗಳೂರು: ಬಹು ನಿರೀಕ್ಷಿತ ಅಯೋಧ್ಯೆ ರಾಮಮಂದಿರ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡುವುದರಿಂದ ನ.9 ರಂದು (ಶನಿವಾರ) ಬೆಳಗಾವಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು ನ್ಯಾಯಾಲಯದ ತೀರ್ಪು ಹೊರ ಬರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.