SHARE

ಬೆಳಗಾವಿ: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ಸಮೀಪದ ಕಡೋಲಿ ಗ್ರಾಮದಲ್ಲಿ ನಡೆದಿದೆ. ಬುಧವಾರ ಸಂಜೆ ಬಾಲಕಿಯನ್ನು ಆಟವಾಡಲು ಕರೆದುಕೊಂಡು ಹೋದ ಸುನೀಲ ಬಾಳನಾಯಕ(೨೬) ಎಂಬ ಯುವಕ ಅತ್ಯಾಚಾರ ಎಸಗಿದ್ದಾನೆ. ಕಾಕತಿ ಪೊಲೀಸರು ಆರೋಪಿತನಿಗಾಗಿ ಶೋಧ ನಡೆಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಫೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಮಾನವೀಯ ಘಟನೆಗೆ ಕಡೋಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಕತಿ ಪಿಐ ಶ್ರೀಶೈಲ ಕೌಜಲಗಿ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.