SHARE

ಬೆಳಗಾವಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಮತ್ತು ನಿರ್ಧಾರಗಳ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳು ಭಾರತ ಬಂದ್ ಕರೆ ನೀಡಿದ್ದ ಭಾರತ ಬಂದ್ ಗೆ ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದಲ್ಲಿ ಈಗಾಗಲೇ ಅಂಗಡಿ ಮುಂಗಟ್ಟುಗಳು ಪ್ರಾರಂಭವಾಗಿದ್ದು ತಮ್ಮ ದೈನಂದಿನ ಪ್ರತಿ ವ್ಯಾಪಾರ ವಹಿವಾಟು ಪ್ರಾರಂಭಿಸಿದ್ದಾರೆ. ಈಗಾಗಲೇ ಕೆ.ಎಸ್.ಆರ್.ಟಿ.ಸಿ ಬಸ್ ಗಳು, ಆಟೋಗಳು, ಟ್ಯಾಕ್ಸಿಗಳು ಎಂದಿನಂತೆ ತಮ್ಮ ಸಂಚಾರ ಆರಂಭಿಸಿದ್ದು, ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ.

ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರೋಧಿಸಿ ಕಾರ್ಮಿಕ ಸಂಘಗಳು ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಸೆವಾ, ಎಐಸಿಸಿಟಿಯು, ಎಲ್‌ಪಿಎಫ್, ಯುಟಿಯುಸಿ ಜೊತೆಗೆ ವಿವಿಧ ವಲಯದ ಸ್ವತಂತ್ರ ಒಕ್ಕೂಟಗಳು ಮತ್ತು ಸಂಘಗಳು ಮುಷ್ಕರ ನಡೆಸುವ ಬಗ್ಗೆ ತೀರ್ಮಾನ ಮಾಡಿವೆ. ಕಾರ್ಮಿಕ ವಿರೋಧಿ, ಜನ ವಿರೋಧಿ, ರಾಷ್ಟ್ರ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಇಂತಹ ಅನೇಕ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ನಾಯಕರು ಹೇಳಿದ್ದರು. “ಕಾರ್ಮಿಕ ಸಚಿವಾಲಯವು ಜನವರಿ 2,2020 ರಂದು ಸಭೆ ಕರೆದರೂ ಕಾರ್ಮಿಕರ ಯಾವುದೇ ಬೇಡಿಕೆಗಳನ್ನು ಈಡೇರಿಸಲು ವಿಫಲವಾಗಿದೆ ಎಂದೂ ನಾಯಕರು ದೂರಿದ್ದಾರೆ. ಭಾರತ ಬಂದ್ ನ ಬಿಸಿ ಕುಂದಾನಗರಿಗೆ ಇಲ್ಲಿಯವರೆಗೆ ಯಾವುದೇ ಎಫೆಕ್ಟ್ ಆಗಿಲ್ಲದಿರುವುದು ಗಮನ ಸೆಳೆದಿದೆ.