SHARE

ಬೆಳಗಾವಿ: ಸರ್ಕಾರದ ಮಹತ್ವಾಕಾಂಕ್ಷಿ ನೂತನ ಯೋಜನೆ ಸರಳ ವಿವಾಹದ ಸಪ್ತಪದಿ ಕಾರ್ಯಕ್ರಮದ ಪ್ರಚಾರ ನಿಮಿತ್ಯ ಇಂದು ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿಗಳ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಆಡಳಿತ ಇಲಾಖೆಗಳ ಸಹಯೋಗದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.

ವಿಚಾರ ಸಂಕಿರಣವನ್ನು ಹಾಸನದ ಚಂಚಲಗೂಡ ಬ್ರಹನಮಠದ ಪೂರ್ಣಚಂದ್ರ ಸ್ವಾಮಿಜಿ ಉದ್ದಾಟಿಸಿದರು. ಸಮಾರಂಭದಲ್ಲಿ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸವದತ್ತಿ ಶಾಸಕ ಆನಂದ ಮಾಮನಿ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು. ಪ್ರಾಸ್ತವಿಕ ಮಾತುಗಳಾಡಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಬೇಕು ಎಂಬ ಉದ್ದೇಶಿದಿಂದ ಆರಂಭಿಸಲಾಗಿರುವ ಸಪ್ತಪದಿ ಸರಳ ವಿವಾಹ ಕಾರ್ಯಕ್ರಮ ಜನಪರ ಕಾರ್ಯಕ್ರಮವಾಗಿ ಹೊರಹೊಮ್ಮಿದ್ದು, ರಾಜಕೀಯವಾಗಿ ಪಕ್ಷಾತೀತವಾಗಿ ಮೆಚ್ಚುಗೆಗೆ ಪಾತ್ರವಾಗಿದೆ ಎಂದರು. ಪ್ರಥಮ ಹಂತದಲ್ಲಿ ಎಪ್ರಿಲ್ 26ರಂದು ಸವದತ್ತಿಯಲ್ಲಿ ಹಾಗೂ 24ರಂದು ರಾಯಭಾಗದಲ್ಲಿ ಸಪ್ತಪದಿ ವಿವಾಹ ಕಾರ್ಯಕ್ರಮ ನಡೆಯಲಿದ್ದು, ನಂತರ ರಾಜ್ಯದ ಎಲ್ಲ ಜಿಲ್ಲೆಗಳ ಎ ಹಾಗೂ ಬಿ ದರ್ಜೆ ದೇವಾಲಯಗಳಲ್ಲಿ ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕರಿಂದ ಈ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಈಗಾಗಲೇ ಎರಡು ಸಾವಿರದ ಐದುನೂರು ಜೋಡಿಗಳು ವಿವಾಹ ನೋಂದಣಿ ಮಾಡಿಸಿಕೊಂಡಿಸದ್ದಾರೆ. ವಿವಾಹವನ್ನು ನಮ್ಮ ಮನೆಯ ಮಗ-ಮಗಳ ಮದುವೆಯ ಸ್ವರೂಪದಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಡೆಸಿಕೊಡಲಾಗುವುದು ಎಂದು ತಿಳಿಸಿದರು.

ರಾಜ್ಯದ ಎಲ್ಲಡೆ ಈ ಕಾರ್ಯಕ್ರಮ ಜಾರಿಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಉಳಿದ ಜನಪ್ರತಿನಿಧಿಗಳನು ಕೇಳಿಕೊಂಡಾಗ ಪ್ರಶಂಸೆ ವ್ಯಕ್ತಪಡಿಸಿ, ಮುಕ್ತ ಸಹಕಾರಕ್ಕೆ ಮುಂದಾಗಿದ್ದಾರೆ. ನಿನ್ನೆ ಧಾರವಾಡದಲ್ಲಿ ಭೆಟ್ಟಿಯಾದ ಜೆಡಿಎಸ್ ಮುಖಂಡ ಎಚ್.ಡಿ. ದೇವೆಗೌಡರೂ ಸಹಿತ ವಿವಾಹ ಕಾರ್ಯಕ್ರಮಕ್ಕೆ ಪ್ರಶಂಸೆ ವ್ಯಕ್ತಪಡಿಸಿ ಬೆಂಬಲ ವ್ಯಕ್ತಪಡೆಸಿದ್ದಾರೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶಾಸಕ ಪಿ. ರಾಜು ಅವರು, ಸಮಾಜದಲ್ಲಿ ಅದ್ದೂರಿ ಮದುವೆಗಳ ಪೈಪೋಟಿ ನಡೆದು ಅನೇಕ ಮನೆತನಗಳು ದುರಂತ ಅಂತ್ಯ ಕಂಡಿವೆ. ಇಂಥ ಸಂದರ್ಭದಲ್ಲಿ ಸರ್ಕಾರ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷಿಯ ಸಪ್ತಪದಿ ಸರಳ ವಿವಾಹ ಮಾದರಿ ವಿವಾಹವಾಗಿದೆ. ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.