SHARE

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ(ಏ.25) ಮತ್ತೇ ಆರು ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಈ ಹೊಸ ಆರು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 51 ಕ್ಕೆ ಏರಿದಂತಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ(ಏ.25) ಬೆಳಿಗ್ಗೆಯ ಪತ್ರಿಕಾ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 6 ಪ್ರಕರಣಗಳು ದೃಢಪಟ್ಟಿರುತ್ತವೆ.

ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 45 ವರ್ಷದ ಪುರುಷ ಪಿ-482; 38 ವರ್ಷದ ಪುರುಷ ಪಿ-483; ಮತ್ತು 80 ವರ್ಷದ ಪಿ-484; 55 ವರ್ಷದ 485; 42 ವರ್ಷದ ಪಿ-486 ಹಾಗೂ 39 ವರ್ಷದ ಪಿ-487 ನಾಲ್ವರು ಮಹಿಳೆಯರಿಗೆ ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ. ಈ ಇಬ್ಬರು ಪುರುಷರು ಮತ್ತು ನಾಲ್ವರು ಮಹಿಳೆಯರು ಪಿ-128 ಸೋಂಕಿತನ ಜತೆ ದ್ವಿತೀಯ ಸಂಪರ್ಕಕ್ಕೆ ಬಂದಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 51 ಜನರಲ್ಲಿ ಸೋಂಕು ಕಂಡುಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. ಈ ಪೈಕಿ ಗುಣಮುಖರಾಗಿರುವ ನಾಲ್ಕು ಜನರನ್ನು ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.