SHARE

ಬೆಳಗಾವಿ: ಮಹಾಮಾರಿ ಕೊರೊನಾ ಸೋಂಕು ತಡೆಗಟ್ಟಲು ಲಾಕ್‍ಡೌನ್ ಘೋಷಣೆ ಮಾಡಿದಾಗಿನಿಂದ ನನ್ನ ಕ್ಷೇತ್ರದಲ್ಲಿ ಸಾಕಷ್ಟು ಜನರು ಸಂಕಷ್ಟ ಎದುರಿಸಿದ್ದಾರೆ. ಹೀಗಾಗಿ ಅವರಿಗೆಲ್ಲಾ ವಿಶೇಷ ಪರಿಹಾರ ಘೋಷಿಸುವಂತೆ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಸಿಎಂ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ.

ಹೌದು ಈ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರನ್ನು ಭೇಟಿಯಾದ ಶಾಸಕ ಅನಿಲ್ ಬೆನಕೆ ಅವರು ಕೊರೊನಾ ಲಾಕ್‍ಡೌನ್‍ನಿಂದ ವಿವಿಧ ವರ್ಗದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ ಅದರಲ್ಲೂ ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳು, ಪುರೋಹಿತರು, ಟೇಲರ್‍ಗಳು, ಚಮ್ಮಾರ ಸಮಾಜ, ತಂಪುಪಾನೀಯ ತಯಾರಕರು ಸೇರಿದಂತೆ ವಿವಿಧ ಕಾಯಕದ ಜನರು ಕೈಯಲ್ಲಿ ಕೆಲಸ ಇಲ್ಲದೇ ಜೀವನ ನಡೆಸುವುದು ದುಸ್ಥರವಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ಈ ಜನರಿಗೆ ವಿಶೇಷ ಪರಿಹಾರ ಘೋಷಿಸುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಡಿಸಿಎಂ ಗೋವಿಂದ್ ಕಾರಜೋಳ ಉಪಸ್ಥಿತರಿದ್ದರು.