SHARE

ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಶುಕ್ರವಾರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ಅವರು ಕಿತ್ತೂರು ಚೆನ್ನಮ್ಮ ಹಾಗೂ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಸೇರಿದಂತೆ ವಿವಿಧ ಮಹನೀಯರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.

ಗೋಕಾಕದಿಂದ ನೇರವಾಗಿ ಕಿತ್ತೂರು ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ ಸಚಿವರು, ಕಿತ್ತೂರು ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಇದಾದ ಬಳಿಕ ಡಾ.ಬಾಬಾಸಾಹೇಬ್ ಅಂಬೇಡ್ಕರ್, ಛತ್ರಪತಿ ಶಿವಾಜಿ ಹಾಗೂ ಬಸವೇಶ್ವರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.

ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಂತರ ಪ್ರವಾಸಿಮಂದಿರಕ್ಕೆ ತೆರಳಿದ ನೂತನ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ನೂರಾರು ಬೆಂಬಲಿಗರು ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.