SHARE

ಬೆಳಗಾವಿ: ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿರುವ ನೇಕಾರರಿಗೆ ಶೀಘ್ರ ಪರಿಹಾರ ವಿತರಿಸಬೇಕು, ಆತ್ಮಹತ್ಯೆ ಮಾಡಿಕೊಂಡ ನೇಕಾರನ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಧನ ಶೀಘ್ರ ವಿತರಿಸಬೇಕು. ಸಂಕಷ್ಟದಲ್ಲಿರುವ ಸಾಂಪ್ರದಾಯಿಕ ವೃತ್ತಿಯ ಬಡವರಿಗೆ ನೆರವು ನೀಡಬೇಕು ಮತ್ತಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪಕ್ಷದ ಜಿಲ್ಲಾ ಉಸ್ತುವಾರಿ ಪಿ.ವಿ.ಮೋಹನ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಲಾಕ್‍ಡೌನ್‍ನಿಂದ ನೇಕಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ನೆರವು ಘೋಷಿಸಿದ್ದರೂ ಮುಟ್ಟಿಲ್ಲ. ನೆರವಿನ ಮೊತ್ತವನ್ನು 5 ಸಾವಿರ ರೂ.ಯಷ್ಟು ಹೆಚ್ಚಿಸಬೇಕು. ಆತ್ಮಹತ್ಯೆ ಮಾಡಿಕೊಂಡ ನೇಕಾರರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು, ರೈತರ ಬೆಳೆಗೆ ಬೆಲೆ ನೀಡಲು 5 ಸಾವಿರ ಕೋಟಿ ರೂ. ಆವರ್ತ ನಿಧಿ ಸ್ಥಾಪಿಸಿ, ಬೆಳೆ ಖರೀದಿಗೆ ವ್ಯವಸ್ಥೆ ಮಾಡಬೇಕು. ಸಂಕಷ್ಟದಲ್ಲಿರುವ ಸಾಂಪ್ರದಾಯಿಕ ವೃತ್ತಿಯ ಬಡವರಿಗೆ ನೆರವು ನೀಡಬೇಕು. ಕೊರೋನಾ ಸೋಂಕು ತಡೆಯಲು ಇನ್ನಷ್ಟು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ರಾಜು ಸೇಠ್ ಮಾತನಾಡಿ, ಸರ್ಕಾರ ಲಾಕ್‍ಡೌನ್ ಸಂಕಷ್ಟದಲ್ಲಿರುವ ಬಡವರ ನೆರವಿಗೆ ಬರಬೇಕು ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.